ಬೆಂಗಳೂರು: ಟೂತ್ ಪೇಸ್ಟ್ ಸೇರಿ ಹಲವು ಗೃಹೋಪಯೋಗಿ ಉತ್ಪನ್ನಗಳಿಗೆ ಖ್ಯಾತಿ ಗಳಿಸಿರುವ ಕೋಲ್ಗೇಟ್ ಪಾಮೋಲಿವ್ (ಇಂಡಿಯಾ) ಲಿಮಿಟೆಡ್ ಕಂಪನಿಯು 2025-26ನೇ ಸಾಲಿಗೆ ವಿದ್ಯಾರ್ಥಿ ವೇತನ (Colgate Keep India Smiling Scholarship 2025-26) ಘೋಷಣೆ ಮಾಡಿದೆ. ‘ಕೋಲ್ಗೇಟ್ ಕೀಪ್ ಇಂಡಿಯಾ ಸ್ಮೈಲಿಂಗ್ ಸ್ಕಾಲರ್ ಶಿಪ್-2025-26’ ವಿದ್ಯಾರ್ಥಿವೇತನ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ವರ್ಷಕ್ಕೆ 75 ಸಾವಿರ ರೂಪಾಯಿವರೆಗೆ ಸ್ಕಾಲರ್ ಶಿಪ್ ಸಿಗಲಿದೆ.
ಬ್ಯಾಚಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್) ಹಾಗೂ ಮಾಸ್ಟರ್ ಆಫ್ ಡೆಂಟಲ್ ಸರ್ಜರಿ (ಎಂಡಿಎಸ್) ಕೋರ್ಸ್ ಗಳನ್ನು ಕಲಿಯುತ್ತಿರುವವರಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಸಂಶೋಧನೆ, ಅಧ್ಯಯನ, ಕೌಶಲ ವೃದ್ಧಿ ಸೇರಿ ಹಲವು ರೀತಿಯಲ್ಲಿ ಹಣ ಬಳಸಿಕೊಳ್ಳಲಿ ಎಂದು ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಕೋಲ್ಗೇಟ್ ಕಂಪನಿ ತಿಳಿಸಿದೆ.
ಅರ್ಹತೆಗಳು ಏನಿರಬೇಕು?
ಅರ್ಜಿದಾರರು ಭಾರತೀಯ ನಾಗರಿಕರಾಗಿರಬೇಕು. ವಿದ್ಯಾರ್ಥಿಗಳು ಮಾನ್ಯತೆ ಪಡೆದ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಯಾವುದೇ ವರ್ಷ) ಅಥವಾ ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ಕೋರ್ಸ್ ದಾಖಲಾಗಿರಬೇಕು. ಪಿಯುಸಿಯಲ್ಲಿ ಕನಿಷ್ಠ 65% ಅಂಕಗಳನ್ನು ಗಳಿಸಿರಬೇಕು. MDS ಅಧ್ಯಯನ ಮಾಡುತ್ತಿರುವವರು BDS ಪದವಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ 8 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು.
ಆಧಾರ್ ಕಾರ್ಡ್, ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಫೋಟೋ, ಕುಟುಂಬದ ಆದಾಯ ಪ್ರಮಾಣಪತ್ರ, ಕಾಲೇಜು ದಾಖಲೆ, ಶೈಕ್ಷಣಿಕ ದಾಖಲೆ, ಶುಲ್ಕ ಪಾವತಿಸಿದ ರಶೀದಿ ಸೇರಿ ಹಲವು ದಾಖಲೆಗಳನ್ನು ಸಲ್ಲಿಸಬೇಕಾತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು https://www.buddy4study.com/page/colgate-keep-india-smiling-scholarship-program ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನವೆಂಬರ್ 9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ತೀವ್ರ ಜ್ವರ | ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ!


















