ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿ (girl)ಯ ಖಾಸಗಿ ಅಂಗ ಸ್ಪರ್ಶಿಸಿ ಅಸಭ್ಯ ವರ್ತನೆ ತೋರಿರುವ ಆರೋಪವೊಂದು ಕೇಳಿ ಬಂದಿದೆ.
ಕೋರಮಂಗಲ (Koramangala) ಪೊಲೀಸ್ ಠಾಣೆ ವ್ಯಾಪ್ತಿಯ 5ನೇ ಬ್ಲಾಕ್ ನಲ್ಲಿ ಜೂನ್ 19 ರಂದು ರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಯುವತಿ ನಡೆದುಕೊಂಡು ಹೋಗುತ್ತಿದ್ದರು. ಬೈಕ್ ನಲ್ಲಿ ಎದುರು ಬಂದ ಪಾಪಿಯೊಬ್ಬ ಖಾಸಗಿ ಅಂಗ ಸ್ಪರ್ಧಿಸಿ ಅಸಭ್ಯ ವರ್ತನೆ ತೋರಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಆಸಾಮಿ ಅಸಭ್ಯ ವರ್ತನೆ ತೋರುತ್ತಿದ್ದಂತೆ ಯುವತಿ ಆತನನ್ನ ಬೈದಿದ್ದಾರೆ ಮತ್ತು ಬೈಕ್ ಅಟ್ಟಿಸಿಕೊಂಡು ಹೋಗಿದ್ದಾರೆ. ಆದರೆ, ಆತ ತಪ್ಪಿಸಿಕೊಂಡು ಹೋಗಿದ್ದಾನೆ.
ಯುವತಿ ಈ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು ಜೊತೆಗೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಆದರೆ ಘಟನೆ ಕುರಿತು ಯಾವ ದೂರು ಕೂಡ ದಾಖಲಾಗಿಲ್ಲ. ಇದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.