ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜರ್, ಸೀನಿಯರ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL)
ಒಟ್ಟು ಹುದ್ದೆ: 17
ಹುದ್ದೆಗಳ ಹೆಸರು: ಮ್ಯಾನೇಜರ್, ಸೀನಿಯರ್ ಡೆಪ್ಯೂಟಿ ಜನರಲ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 16
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 30 ಸಾವಿರ ರೂ.ನಿಂದ 2.2 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ www.rvnl.org ಗೆ ಭೇಟಿ ನೀಡಬಹುದು.
ಎಸ್ಸಿ, ಎಸ್ಟಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 400 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ಮೊದಲಿಗೆ rvnl.org ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Dispatch Section, Ground Floor, August Kranti Bhawan, Bhikaji Cama Place, R.K. Puram, New Delhi-110066