ಬೆಂಗಳೂರು: ಡಾ. ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮಾರುತ ಚಿತ್ರದ ಹಾಡುಗಳಿಗೆ ಹೆಸರಾಂತ ಗಾಯಕರು ಧ್ವನಿ ನೀಡಿದ್ದಾರೆ.
ಈ ಚಿತ್ರ ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರವಾಗಿದೆ. ಜೆಸ್ಸಿಗಿಫ್ಟ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಎಸ್. ನಾರಾಯಣ್ ಬರೆದಿರುವ ಐದು ಹಾಡುಗಳು “ಮಾರುತ” ಚಿತ್ರದಲ್ಲಿವೆ. ಖ್ಯಾತ ಗಾಯಕ ಸೋನು ನಿಗಮ್ ಅವರು ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ಉಳಿದ ಹಾಡುಗಳ ವಾಯ್ಸ್ ಮಿಕ್ಸ್ ಬೆಂಗಳೂರಿನ ರೇಣು ಸ್ಟುಡಿಯೋದಲ್ಲಿ ನಡೆದಿದ್ದು, ಹರಿಚರಣ್, ಅನುರಾಧ ಭಟ್, ಅನನ್ಯ ಭಟ್, ಶಮಿತಾ ಮಲ್ನಾಡ್ ಹಾಗೂ ಚಂದನ್ ಶೆಟ್ಟಿ ಧ್ವನಿ ನೀಡಿದ್ದಾರೆ.
ಪಿ.ಕೆ.ಎಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನ ಚಿತ್ರಕ್ಕೆ ಇದೆ. ಶ್ರೇಯಸ್ ಕೆ ಮಂಜು, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಸೇರಿದಂತೆ ಹಲವರು ನಟಿಸಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ.