ಬೆಂಗಳೂರು: ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (SABVMCRI Recruitment 2025) ಡೇಟಾ ಮ್ಯಾನೇಜರ್ ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬುಧವಾರವೇ (ಮಾರ್ಚ್ 5) ಅರ್ಜಿ ಸಲ್ಲಿಸಲು ಕೊನೆಯ ದಿನವಾದ ಕಾರಣ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬೇಕಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಎಸ್ಎಬಿಎಂಸಿಆರ್ ಐ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ , ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳಿಗಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್, ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು, ಕರ್ನಾಟಕ ಇಲ್ಲಿಗೆ ಮಾರ್ಚ್ 5ರಂದು ಅಥವಾ ಅದಕ್ಕೂ ಮೊದಲು ಕಳುಹಿಸಬೇಕು.
ಅರ್ಜಿ ಪಡೆಯುವುದು ಹೇಗೆ?
ಎಸ್ಎಬಿಎಂಸಿಆರ್ ಐ ಸಂಸ್ಥೆಯ https://sabvmcri.karnataka.gov.in/ ವೆಬ್ ಪೋರ್ಟಲ್ ನಲ್ಲಿ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆ ಅಧಿಸೂಚನೆಯ ಮಾಹಿತಿ ಕೂಡ ಇಲ್ಲಿಯೇ ಸಿಗಲಿದೆ. ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಬೆಂಗಳೂರಿನ ಕಚೇರಿಗೆ ತಂದು ಸಲ್ಲಿಸಬೇಕು. ಆಫ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಅರ್ಜಿ ಸಲ್ಲಿಸಿದ ಬಳಿಕ ಮಾರ್ಚ್ 7ರಂದು ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಬೆಳಗ್ಗೆ 10.30ಕ್ಕೆ ಸಂದರ್ಶನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.