ಬೆಂಗಳೂರು: ಸಚಿವ ಭೈರತಿ ಸುರೇಶ್ ಅವರ ತಾಯಿ ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸುಶೀಲಮ್ಮ (85) ತಡರಾತ್ರಿ ನಿಧನ ಹೊಂದಿದ್ದಾರೆ. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಸಂತಾಪ ಸೂಚಿಸಿದ್ದಾರೆ. ಇಂದು ಸಂಜೆ ಭೈರತಿ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆಯನ್ನ ನಡೆಸಲಾಗುತ್ತದೆ. ಹಲವಾರು ಗಣ್ಯರು, ಕಾಂಗ್ರೆಸ್ ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕುಟುಂಬ ಮೂಲಗಳು ಹೇಳಿವೆ.



















