ಬೆಂಗಳೂರು: ಶಾಪಿಂಗ್ ಗೆ ತೆರಳಿದ್ದ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಅವರ ಪತ್ನಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್ ನಲ್ಲಿ ನಡೆದಿದೆ. ಮಾಲ್ ನಲ್ಲಿ ಡಾಟಿ ಸದಾನಂದಗೌಡ ಅವರು ಏಕಾಏಕಿ ಉಸಿರಾಟದ ತೊಂದರೆಯಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಇದನ್ನು ಗಮನಿಸಿದ ಅವರ ಕಾರು ಚಾಲಕ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ವಿಷಯ ತಿಳಿದು ಪತ್ನಿ ನೋಡಲು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದಗೌಡ ಆಸ್ಪತ್ರೆಗೆ ಆಗಮಿಸಿದ್ದಾರೆ. ಅಲ್ಲದೇ, ಸದಾನಂದಗೌಡ ಅವರೊಂದಿಗೆ ದಾಸರಹಳ್ಳಿ ಶಾಸಕ ಮುನಿರಾಜು ಹಾಗೂ ಸುಜಾತ ಮುನಿರಾಜು ಕೂಡ ಅಸ್ಪತ್ರೆಗೆ ಆಗಮಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಡಾಟಿ ಸದಾನಂದಗೌಡ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರು ಇದುವರೆಗೂ ಏನೂ ಹೇಳಿಲ್ಲ ಎನ್ನಲಾಗಿದೆ.