ಇಂದು ದೆಹಲಿಯಲ್ಲಿ ಧರ್ಮಸ್ಥಳದ ಖಾವಂದರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದೆ ಎಂದು ಮಾಜಿ ಕೇಂದ್ರ ಸಚಿವ ಸದಾನಂದ ಗೌಡರವರು ಪತ್ರಿಕೆಯೊಂದಿಗೆ ಮಾಹಿತಿ ಹಂಚಿಕೊಂಡರು.

ಇಂದು ಬೆಳಿಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿಗಳ ದೆಹಲಿ ಭೇಟಿಗೆ ಅವಕಾಶ ದೊರೆತಿದ್ದು, ಸಮಯ ಸದುಪಯೋಗವಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯ್ತು. ಹಾಗೆಯೇ ರಾಜ್ಯ ಸಭೆಯಲ್ಲಿ ಈ ವಿಷಯಗಳ ಬಗ್ಗೆ ಪ್ರಸ್ತಾಪಿಸಿ, ಚರ್ಚಿಸಲು ಮನವಿ ಮಾಡಲಾಯ್ತು ಎಂದರು.