ಉಡುಪಿ | ಸಾಹಸ್ ಸಂಸ್ಥೆಯ ‘ಸ್ವಚ್ಛ ಕರಾವಳಿ ಮಿಷನ್’ ಯೋಜನೆ ಹಾಗೂ ಶಓಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ ಸಿಎಸ್ಆರ್ ಬೆಂಬಲದೊಂದಿಗೆ ಸ್ವಚ್ಛತಾ ಆಂದೋಲನದ ಅಂಗವಾಗಿ ಇಂದು ಬೃಹತ್ ಬೈಕ್ ರ‍್ಯಾಲಿಯನ್ನು ಆಯೋಜಿಸಲಾಯಿತು. ಈ ರ‍್ಯಾಲಿ ಬೈಂದೂರಿನಿಂದ ತ್ರಾಸಿವರೆಗೆ ನಡೆಯಿತು.
ಕರಾವಳಿ ಪ್ರದೇಶಗಳಲ್ಲಿ ಸ್ವಚ್ಛತೆ, ಪರಿಸರ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬೈಕ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ರ‍್ಯಾಲಿಯಲ್ಲಿ ಪಾಲ್ಗೊಂಡವರು ಸ್ವಚ್ಛತೆಯ ಮಹತ್ವದ ಕುರಿತು ಜನರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಸಾಹಸ್ ಸಂಸ್ಥೆಯ ಸಿಬ್ಬಂದಿಗಳು, ಸ್ವಯಂಸೇವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಬೆಂಬಲ ನೀಡಿದರು. ರ‍್ಯಾಲಿಗೆ ಸ್ಥಳೀಯರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಇದನ್ನೂ ಓದಿ : ಅಣ್ಣಾಮಲೈ ದಿಢೀರ್ ರಾಜೀನಾಮೆ.. ಬಿಜೆಪಿಗೆ ಬಿಗ್ ಶಾಕ್!



















