ಖದೀಮನ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆಗೊಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜ. 16ರಂದು ಈ ಘಟನೆ ನಡೆದಿತ್ತು. ರಾತ್ರಿ ವೇಳೆ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ಖದೀಮ, ಸೈಫ್ ಅಲಿಖಾನ್ ಗೆ ಚಾಕುವಿನಿಂದ ಇರಿದಿದ್ದ. ಘಟನೆಯಲ್ಲಿ ನಟ ತೀವ್ರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಮುಂಬಯಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮನೆಗೆ ಮರಳುತ್ತಿರುವ ವಿಡಿಯೋ ವೈರಲ್ ಆಗಿದೆ. ಘಟನೆಯ ನಂತರ ಸೈಫ್ ಅಲಿ ಖಾನ್ ಮನೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.
ಎರಡು ಸರ್ಜರಿ ಮಾಡಿ ಅವರ ಬೆನ್ನಿನಲ್ಲಿ ಇದ್ದ ಚಾಕು ಹೊರಗೆ ತೆಗೆಯಲಾಗಿದೆ. ಕುತ್ತಿಗೆ ಭಾಗದ ಗಾಯಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಈಗ ಅವರು ಬಹುತೇಕ ಚೇತರಿಸಿಕೊಂಡಿದ್ದು, ಮನೆಗೆ ಬಂದಿದ್ದಾರೆ.