ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಪುದ್ದಿನ್ ಆತ್ರಾಡಿ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ (ಸೆಕ್ಷನ್ 3 ಕೋಕಾ ಆಯಕ್ಟ್) ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಈಗಾಗಗಲೇ 5 ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಮುಖ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದಾರೆ. ಹೀಗಾಗಿ ಪ್ರಕರಣದ ತನಿಖೆಯ ಅವಧಿ 90ರಿಂದ 180 ದಿನಕ್ಕೆ ವಿಸ್ತರಣೆ ಮಾಡಲಾಗಿದೆ.

ಬಂಧಿತರ 10 ವರ್ಷಗಳ ಕ್ರಿಮಿನಲ್ ಹಿನ್ನಲೆ ಪರಿಶೀಲಿಸಿದಾಗ 2 ಕ್ಕಿಂತ ಹೆಚ್ಚು ಘೋರ ಅಪರಾಧಗಳಲ್ಲಿ ಭಾಗಿಯಾದ ಹಿನ್ನಲೆಯಲ್ಲಿ, ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಕೋಕಾ ಕಾಯ್ದೆ ದಾಖಲಾದರೆ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕುವ ಅವಕಾಶ ಕಾನೂನಿನಲ್ಲಿದ್ದು, ಜೊತೆಗೆ ಜಾಮೀನು ಕೂಡ ಸಿಗುವುದಿಲ್ಲ.
ಈ ಪ್ರಕರಣ ಕ್ರಿಮಿನಲ್ ಕೃತ್ಯಗಳಿಗೆ ಮುಂದಾಗುವವರಿಗೆ ಎಚ್ಚರಿಕೆ, ಯಾರು ಎರಡಕ್ಕಿಂತ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗುತ್ತಾರೋ ಅವರ ವಿರುದ್ಧ ಕೋಕಾ ಕಾಯ್ದೆ ಅನ್ವಯವಾಗುತ್ತದೆ”ಎಂದು ಎಸ್ ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ವಿಜಯಪುರ | ನೋಡು ನೋಡುತ್ತಲೇ ಧಗಧಗನೆ ಹೊತ್ತಿ ಉರಿದ ಹೊಟೇಲ್



















