ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರು, ಈಗಷ್ಟೇ ಎಂಜಿನಿಯರಿಂಗ್ ಮುಗಿಸಿ ವೃತ್ತಿ ತರಬೇತಿ ಪಡೆಯಲು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL MT Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 124 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL)
ಹುದ್ದೆಗಳ ಹೆಸರು: ಮ್ಯಾನೇಜ್ ಮೆಂಟ್ ಟ್ರೇನಿ
ಒಟ್ಟು ಹುದ್ದೆಗಳು: 124
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್, ಒಬಿಸಿ ಹಾಗೂ ಇಡಬ್ಲ್ಯೂಎಸ್ ಸಮುದಾಯದವರಿಗೆ 1,050 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://sail.co.in/en ಗೆ ಭೇಟಿ ನೀಡಬೇಕು
- ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಘೋಷಣೆ : ಈ ಕೂಡಲೇ ಅರ್ಜಿ ಸಲ್ಲಿಸಿ


















