ಬೆಂಗಳೂರು: ಗುಮ್ಮಟ ನಗರಿ ವಿಜಯಪುರದಲ್ಲಿರುವ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ಹಾಗೂ ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಸುವ ಮೂಲಕ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಸೈನಿಕ ಶಾಲೆ ಬಿಜಾಪುರ
ಒಟ್ಟು ಹುದ್ದೆಗಳು: 02
ಹುದ್ದೆ ಹೆಸರು: ಲೋವರ್ ಡಿವಿಷನ್ ಕ್ಲರ್ಕ್
ಉದ್ಯೋಗ ಸ್ಥಳ: ವಿಜಯಪುರ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 17
ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 18-50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 19,900 ರೂಪಾಯಿಯಿಂದ 63,200 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸೈನಿಕ ಶಾಲೆಯ ಅಧಿಕೃತ ವೆಬ್ ಸೈಟ್ https://ssbj.in/ ಗೆ ಭೇಟಿ ನೀಡಬೇಕು
Sainik School Bijapur ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಯ ಅಧಿಸೂಚನೆ ಓದಬೇಕು.
ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಸಲ್ಲಿಕೆ ಮಾಡಲಾದ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರಾಂಶುಪಾಲರು,
ಸೈನಿಕ ಶಾಲೆ ವಿಜಯಪುರ
586108