ಬೆಂಗಳೂರು: ಕೊಡಗಿನಲ್ಲಿರುವ ಸೈನಿಕ ಶಾಲೆಯಲ್ಲಿ ಖಾಲಿ ಇರುವ ನಾಲ್ಕು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆರ್ಟ್ ಮಾಸ್ಟರ್ ಹಾಗೂ ವಾರ್ಡ್ ಬಾಯ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಕೊಡಗು ಜಿಲ್ಲೆಯಲ್ಲಿ (Sainik School Kodagu Recruitment 2025) ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಂತಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೈನಿಕ ಶಾಲೆ, ಕೊಡಗು
ಒಟ್ಟು ಹುದ್ದೆಗಳು: 04
ಉದ್ಯೋಗ ಸ್ಥಳ: ಕೊಡಗು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಆರ್ಟ್ ಮಾಸ್ಟರ್ ಹಾಗೂ ವಾರ್ಡ್ ಬಾಯ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 26
ಒಂದು ಆರ್ಟ್ ಮಾಸ್ಟರ್ ಹಾಗೂ ಮೂರು ವಾರ್ಡ್ ಬಾಯ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಎಸ್ಸೆಸ್ಸೆಲ್ಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಮೊದಲು sainikschoolkodagu.edu.in ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು The Principal, Sainik School Kodagu ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.
ದೇಶದ ಸಶಸ್ತ್ರ ಪಡೆಗಳಲ್ಲಿ ಮಕ್ಕಳು ಕೆಲಸ ಮಾಡಬೇಕು, ದೇಶ ಸೇವೆ ಮಾಡಬೇಕು ಎಂದು ಮಕ್ಕಳ ಪೋಷಕರು ಬಯಸುತ್ತಾರೆ. ಹಾಗೆಯೇ, ಸೈನಿಕ ಶಾಲೆಗಳಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರಿ ವಿವಿಧ ಮಿಲಿಟರಿ ಸಂಬಂಧಿತ ಸಂಸ್ಥೆಗಳ ಪ್ರವೇಶಕ್ಕಾಗಿ ಅಗತ್ಯ ಕೌಶಲಗಳನ್ನು ವೃದ್ಧಿಸಲಾಗುತ್ತದೆ. ಹಾಗೆಯೇ, ಮಕ್ಕಳಲ್ಲಿ ಶಿಸ್ತು, ನಾಯಕತ್ವದ ಗುಣಗಳನ್ನು ಬೆಳೆಸಲಾಗುತ್ತದೆ. ಇದೇ ಕಾರಣಕ್ಕಾಗಿ ಲಕ್ಷಾಂತರ ಪೋಷಕರು ಮಕ್ಕಳನ್ನು ಸೈನಿಕ ಶಾಲೆಗೆ ಸೇರಿಸಲು ಬಯಸುತ್ತಾರೆ.
ಇದನ್ನೂ ಓದಿ : ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನೇಮಕ : 30 ಸಾವಿರ ರೂ. ಸಂಬಳ



















