ಬೆಂಗಳೂರು: ಕೊಡಗಿನಲ್ಲಿರುವ ಸೈನಿಕ ಶಾಲೆಯಲ್ಲಿ ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಾರ್ಡ್ ಬಾಯ್, ಶಿಕ್ಷಕರು ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಕೊಡಗು ಜಿಲ್ಲೆಯಲ್ಲಿ (Sainik School Kodagu Recruitment 2026) ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಂತಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೈನಿಕ ಶಾಲೆ, ಕೊಡಗು
ಒಟ್ಟು ಹುದ್ದೆಗಳು: 07
ಉದ್ಯೋಗ ಸ್ಥಳ: ಕೊಡಗು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ವಾರ್ಡ್ ಬಾಯ್, ಶಿಕ್ಷಕರು ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 6
2 ವಾರ್ಡ್ ಬಾಯ್, 1 ನರ್ಸಿಂಗ್ ಸಿಸ್ಟರ್, 4 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಬಿಎಸ್ಸಿ, ಬಿ.ಎಡ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 47 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಮೊದಲು sainikschoolkodagu.edu.in ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು The Principal, Sainik School Kodagu- 571232 ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.



















