ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಡೆವಿಲ್. ಈಗಾಗಲೇ ದರ್ಶನ್ ಜೈಲಿನಿಂದ ಬಿಡುಗಡೆಯಾಗಿ ಬಂದ ನಂತರ, ಡೆವಿಲ್ ತಂಡ ಇಲ್ಲಿವರೆಗೆ ರಾಜಸ್ಥಾನದಲ್ಲಿ ಸಿನಿಮಾ ಶೂಟಿಂಗ್ ಮಾಡಿ, ಇದೀಗ ರಿಲೀಸ್ ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈಗ ಈ ಚಿತ್ರದ ನಟಿ ಭಾರೀ ಸದ್ದು ಮಾಡುತ್ತಿದ್ದಾರೆ. ಅವರ ಸೌಂದರ್ಯ ಎಲ್ಲರನ್ನೂ ಸೆಳೆಯುತ್ತಿದೆ. ಪತ್ರಿಕೋದ್ಯಮದಲ್ಲಿ ಪದವಿ ಪಡೆದಿರುವ ಈ ನಟಿ ಸದ್ಯ ಗುರುತಿಸಿಕೊಂಡಿರುವುದು ನಟಿಯಾಗಿ. ಮುದ್ದಾದ ನಟನೆಯ ಮೂಲಕ ಸಿನಿಪ್ರಿಯರ ಮನ ಸೆಳೆದಿರುವ ಈಕೆಯ ಹೆಸರು ರಚನಾ ರೈ. ರಚನಾ ರೈ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಡಗಿ. ಕೋಸ್ಟಲ್ ವುಡ್ ಮೂಲಕ ನಟನೆಯ ನಂಟು ಬೆಳೆಸಿಕೊಂಡ ರಚನಾ ರೈ ಸದ್ಯ ಸ್ಯಾಂಡಲ್ ವುಡ್ ನಲ್ಲಿ ಮೋಡಿ ಮಾಡುತ್ತಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 9 ರ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಸರ್ಕಸ್’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ನಟನೆಗೆ ಕಾಲಿಟ್ಟರು ರಚನಾ ರೈ. ಕರಾವಳಿ ಬೆಡಗಿ ಡೆವಿಲ್ ಸಿನಿಮಾ ನಾಯಕಿ ರಚನಾ ರೈ ಅಂದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಚನಾ, ತಮ್ಮ ಹೊಸ ಫೋಟೊ ಶೂಟ್ ಮೂಲಕ ಸೋಶಿಯಲ್ ಮೀಡೀಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ. ನಟಿ ಉದಯಪುರದಲ್ಲಿ ಶೂಟಿಂಗ್ ಸಮಯದಲ್ಲಿ ಕೇಸರಿ ಬಣ್ಣದ ಸ್ಲೀವ್ ಲೆಸ್ ಸಲ್ವಾರ್ ಸೂಟ್ ಧರಿಸಿ, ವಿವಿಧ ಭಂಗಿಯಲ್ಲಿ ಪೋಸ್ ನೀಡಿದ್ದಾರೆ.