ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಈ ಬಾರಿ ಬೆಳ್ಳಿಪರದೆಯ ಕಳೆ ಮತ್ತಷ್ಟು ಹೆಚ್ಚಾಗಲಿದೆ. ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌ನ ಸುಮಾರು 30 ಖ್ಯಾತ ನಟ-ನಟಿಯರು ಭಾಗವಹಿಸಲಿದ್ದಾರೆ.
ನಟ ಯಶ್, ಶಿವರಾಜ್‌ಕುಮಾರ್, ಸುದೀಪ್, ರವಿಚಂದ್ರನ್ ಸೇರಿದಂತೆ ಹಲವು ಪ್ರಮುಖ ತಾರೆಯರು ತೆರೆದ ಅಂಬಾರಿ ಬಸ್‌ನಲ್ಲಿ ಮೆರವಣಿಗೆಯಲ್ಲಿ ಸಾಗಲಿದ್ದಾರೆ. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ರಚಿತಾ ರಾಮ್ ಸೇರಿದಂತೆ ಹಲವು ಕಲಾವಿದರು ಕೂಡ ಭಾಗಿಯಾಗಲಿದ್ದಾರೆ.
ಚಿತ್ರರಂಗದ ತಾರೆಯರನ್ನು ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಶೇಷ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಕನ್ನಡ ಚಿತ್ರರಂಗದ 93 ವರ್ಷಗಳ ಪಯಣವನ್ನು ಬಿಂಬಿಸುವ ವಿಶೇಷ ಸ್ತಬ್ಧಚಿತ್ರವೂ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಲಿದೆ.
ಅಣ್ಣಾವ್ರು ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಸ್ಮರಣೆಯ ಸ್ತಬ್ಧಚಿತ್ರಗಳು ಕೂಡ ಇರಲಿವೆ. ಜನದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಮೆರವಣಿಗೆಯನ್ನು ಕೆ.ಆರ್. ಸರ್ಕಲ್‌ವರೆಗೆ ನಡೆಸಲು ಯೋಜಿಸಲಾಗಿದೆ.
ಇದನ್ನೂ ಓದಿ : ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!



















