ನನಗೆ 386 ಜನ ಗರ್ಲ್ ಫ್ರೆಂಡ್ಸ್ ಇದ್ದರು. ಆದರೆ, ಈ ವಿಚಾರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನನ್ನನ್ನು ಮೀರಿಸ್ತಾರೆ ಎಂದು ಬಾಲಿವುಡ್ ನಟ ಸಂಜಯ್ ದತ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕೆಡಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ತುಂಬಾ ಅದೃಷ್ಟವಂತ, ರವಿಚಂದ್ರನ್ ಜೊತೆ ನಟಿಸುತ್ತಿರುವುದು ತುಂಬಾ ಖುಷಿ ತಂದಿದೆ. ಕನ್ನಡ ಮಾತ್ರವಲ್ಲದೇ ಎಲ್ಲಾ ಭಾಷೆಗಳಲ್ಲೂ ನಾನು ನಟಿಸುತ್ತಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕೆಡಿ ಡೆವಿಲ್ ಸಿನಿಮಾವನ್ನು ಜೋಗಿ ಪ್ರೇಮ್ ನಿರ್ದೇಶಿಸಿದ್ದು, ಧೃವ ಸರ್ಜಾ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ಶಿಲ್ಪಾ ಶೆಟ್ಟಿ, ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಕೂಡ ಪಾತ್ರವರ್ಗದಲ್ಲಿ ಇದ್ದಾರೆ.



















