ಬೆಂಗಳೂರು | ಬೆಂಗಳೂರಿನಲ್ಲಿ ವೀಸಾ ನಿಯಮ ಉಲ್ಲಂಘನೆ ಪ್ರಕರಣ ಬೆಳಕಿಗೆ ಬಂದಿದೆ. ಸಂಜಯನಗರ ವ್ಯಾಪ್ತಿಯ ಭೂಪಸಂದ್ರದಲ್ಲಿ ಅಕ್ರಮವಾಗಿ ವಾಸವಾಗಿದ್ದ 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇವರಲ್ಲಿ ಒಬ್ಬ ಮಹಿಳೆಯೂ ಸೇರಿದ್ದಾರೆ.
ಕ್ಯಾಮರೂನ್‌ನ ದೇಶದ 5 ಮಂದಿ ಹಾಗೂ ಸುಡಾನ್‌ನ 3 ಮಂದಿ ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ ಆಗಮಿಸಿದ್ದರು. ಆದರೆ, ವೀಸಾ ಅವಧಿ ಮುಗಿದ ನಂತರವೂ ಅವರು ನಗರದಲ್ಲೇ ಹಲವು ವರ್ಷಗಳಿಂದ ಅಕ್ರಮವಾಗಿ ಉಳಿದಿದ್ದರು ಎಂಬ ಆರೋಪ ಕೇಳಿಬಂದಿದೆ.
ಪ್ರಸ್ತುತ 8 ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, FRRO ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಕಾನೂನು ಪ್ರಕ್ರಿಯೆಯಂತೆ ಅವರವರ ದೇಶಗಳಿಗೆ ಕಳುಹಿಸುವ ಪ್ರಕ್ರಿಯೆ ಆರಂಭವಾಗಲಿದೆ.
ಉತ್ತರ ವಿಭಾಗದ ಉಪಪೊಲೀಸ್ ಆಯುಕ್ತ ಬಿ.ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ, ಜೆ.ಸಿ.ನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೆ.ಎಸ್. ತನ್ನೀರ್ ಅವರ ನೇತೃತ್ವದಲ್ಲಿ, ಸಂಜಯನಗರ ಠಾಣೆ ಇನ್ಸಪೆಕ್ಟರ್ ಭಾಗ್ಯವಂತಿ ಜೆ. ಬಂಟಿ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಚರಣೆ ನಡೆಸಿ ಅಕ್ರಮವಾಗಿ ವಾಸವಾಗಿದ್ದ 8 ವಿದೇಶಿ ಪ್ರಜೆಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್



















