ಬೆಂಗಳೂರು: ಮತ್ತೆ ಹೊಸ ರೂಪದಲ್ಲಿ ಬರುತ್ತಿರುವ ‘ಸಂಜು ವೆಡ್ಸ್ ಗೀತಾ2’ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಥ್ ನೀಡಿದ್ದಾರೆ.
ನಾಗಶೇಖರ್ ಸಾರಥ್ಯದ ಸಂಜು ವೆಡ್ಸ್ ಗೀತಾ2 ಜೂನ್ 6ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ. ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಶಿವಣ್ಣ ಭಾಗಿಯಾಗಿ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ.
ಸಂಜು ವೆಡ್ಸ್ ಗೀತಾ 2 ಕಳೆದ ಜನವರಿಯಲ್ಲಿ ರಿಲೀಸ್ ಆಗಿತ್ತು. ಆದರೆ, ಕೆಲವು ಕಾರಣಾಂತರಗಳಿಂದಾಗಿ ಚಿತ್ರದ ಶೋಗಳನ್ನು ರದ್ದು ಮಾಡಲಾಗಿತ್ತು. ಈಗ ತಂದೆ- ಮಗಳ ಸೆಂಟಿಮೆಂಟ್ ಸೀನ್ ಸೇರಿದಂತೆ ಹೊಸದಾಗಿ ಸೇರಿಸಿ ಮತ್ತೆ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.