ಮೈಸೂರು : ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬ ವಿಜೃಂಭಣೆಯಿಂದ ನಡೆಯುತ್ತಿದೆ. ಎತ್ತ ತಿರುಗಿದರು ಹಬ್ಬದ ವಾತವರಣ. ಅಂತೆಯೇ ಮೈಸೂರಿನ ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿ ಸಂಕ್ರಾಂತಿ ಹಬ್ಬವನ್ನ ಅದ್ದೂರಿಯಾಗಿ ಆಚರಿಸಿದ್ದಾರೆ.
ಯೋಗನರಸಿಂಹ ದೇವಾಲಯದಲ್ಲಿ ಬೆಳಗಿನಿಂದಲೇ ವಿಶೇಷ ಪೂಜೆ ಪುನಸ್ಕಾರ ನಡೆಯುತ್ತಿದ್ದು, ಭಕ್ತರು ಗೋವಿಗೆ ಕಬ್ಬು, ಬೆಲ್ಲ ತಿನ್ನಿಸಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮಿಸಿದ್ದಾರೆ.
ಈ ಸಂಕ್ರಾಂತಿ ಗೋಪೂಜೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದು, ಗೋ ಮಾತೆಗೆ ಪೂಜೆ ಸಲ್ಲಿಸಿ ಎಳ್ಳು-ಬೆಲ್ಲ, ಬಾಳೆಹಣ್ಣು ತಿನ್ನಿಸಿ ಭಕ್ತರೊಂದಿಗೆ ಗೋ ಮಾತೆಯ ಆಶೀರ್ವಾದ ಪಡೆದಿದ್ದಾರೆ.
ಇದನ್ನೂ ಓದಿ : ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ



















