‘ರಾಜ್ಯ ಸರ್ಕಾರಕ್ಕೆ ಅಕ್ಕಿ ಹಂಚುವ ಯೋಗ್ಯತೆ ಇಲ್ಲ’ ಎಂದು ಹೇಳಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
‘ಕೇಂದ್ರ ಸಚಿವರಾಗಿ ಈ ರೀತಿ ಮಾತನಾಡುವುದು ಸರಿಯೇ? ಕೇಂದ್ರ ಸರ್ಕಾರ ರಾಜ್ಯಗಳಿಗೆ ನರೇಗಾ ಹಣ ಕೊಡುತ್ತಿಲ್ಲ.
ನಾವು ಕೂಡ ಹಾಗೆಯೇ ಮಾತನಾಡಬಹುದಾ’ ಎಂದು ಪ್ರಶ್ನಿಸಿದ್ದಾರೆ. ‘ದೇಶದಲ್ಲಿ ಬಡತನ ಹೆಚ್ಚಳವಾಗುತ್ತಿರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳುತ್ತಾರೆ. ಆದರೆ, ಪ್ರಧಾನಿ ಮೋದಿ ಅವರು ಬಡತನ ನಿರ್ಮೂಲನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇಬ್ಬರಲ್ಲಿ ಯಾರ ಹೇಳಿಕೆ ಸರಿ’ ಎಂಬುವುದನ್ನು ಜನರೇ ವಿಚಾರ ಮಾಡಬೇಕು ಎಂದಿದ್ದಾರೆ.