ಬೆಂಗಳೂರು: ಜಮ್ಮು ಕಾಶ್ಮೀರಕ್ಕ ತೆರಳಿರುವ ಸಚಿವ ಸಂತೋಷ್ ಲಾಡ್ ಅವರು ಪಹಲ್ಗಾಮ್ ನಲ್ಲಿ ಕನ್ನಡಿಗರ ಭೇಟಿ ಮಾಡಿದ್ದಾರೆ.

ಭಯೋತ್ಪಾದಕರ ದಾಳಿಯಲ್ಲಿ ತೊಂದರೆಗೊಳಗಾಗಿರುವ ಕನ್ನಡಿಗ ಪ್ರವಾಸಿಗರು, ಸಚಿವ ಸಂತೋಷ್ ಲಾಡ್ ಅವರ ಸಹಾಯಕ್ಕೆ ಧನ್ಯವಾದ ತಿಳಿಸಿದ್ದಾರೆ. ಸಚಿವ ಲಾಡ್ ಅವರಿಗೆ ಬೆಳಗ್ಗೆ ಕರೆ ಮಾಡಿದ್ದೆ. ಅವರು ಹತ್ತು ನಿಮಿಷದಲ್ಲಿ ಬರುತ್ತೇನೆ ಎಂದಿದ್ದರು. ಅವರು ಹೇಳಿದಂತೆ ತಮ್ಮ ತಂಡದೊಂದಿಗೆ ಇಲ್ಲಿಗೆ ಬಂದರು. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡರು. ಲಾಡ್ ಅವರು ಹಾಗೂ ಕರ್ನಾಟಕ ಸರ್ಕಾರ ಸದಾ ನಮ್ಮೊಂದಿಗೆ ಇದೆ. ಲಾಡ್ ಅವರಿಗೆ ಧನ್ಯವಾದಗಳು” ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.
ಸಂತ್ರಸ್ತರಾಗಿರುವ ಕನ್ನಡಿಗ ಪ್ರವಾಸಿಗರಿಗೆ ಲಾಡ್ ಅವರು ಧೈರ್ಯ ಹೇಳಿ ಅವರ ಯೋಗಕ್ಷೇಮವನ್ನೂ ವಿಚಾರಿಸಿದ್ದಾರೆ. ಅಲ್ಲದೇ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.