ನವದೆಹಲಿ: ಸಮರ್ಪಕ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ (Fasting) ಆರಂಭಿಸಿರುವ ಸಚಿವೆ ಅತಿಶಿ (Atishi Marlena) ಆರೋಗ್ಯ ಸ್ಥಿತಿ ಕೈ ಕೊಟ್ಟಿದೆ ಎಂದು ಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಅನಿರ್ದಿಷ್ಟ ಉಪವಾಸ ಸತ್ಯಾಗ್ರಹದಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

ವೈದ್ಯರ ಸಲಹೆ ತಿರಸ್ಕರಿಸಿರುವ ಸಚಿವೆ ಅತಿಶಿ ಆರೋಗ್ಯ (Health) ಹದಗೆಟ್ಟಿದ್ದರೂ, ಹರಿಯಾಣವು (Haryana) ದೆಹಲಿಗೆ ನ್ಯಾಯಯುತವಾದ ನೀರನ್ನು (Delhi Water Crisis) ಬಿಡುಗಡೆ ಮಾಡುವವರೆಗೆ ಅನಿರ್ದಿಷ್ಟ ಉಪವಾಸ ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ರಕ್ತದೊತ್ತಡ, ಸಕ್ಕರೆಯ ಮಟ್ಟ ಕುಸಿಯುತ್ತಿದೆ. ನನ್ನ ತೂಕವು ಕಡಿಮೆಯಾಗಿದೆ. ಇದು ದೀರ್ಘಾವಧಿಯಲ್ಲಿ ನನ್ನ ದೇಹದ ಮೇಲೆ ಹಾನಿಕಾರಕ ಪರಿಣಾಮ ಉಂಟು ಮಾಡಬಹುದು. ಈ ಎಚ್ಚರಿಕೆಗಳ ಹೊರತಾಗಿಯೂ ನಾನು ಆಸ್ಪತ್ರೆಗೆ ದಾಖಲಾಗುವುದಿಲ್ಲ. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸ ಕೈ ಬಿಡುವುದಿಲ್ಲ ಎಂದು ಹೇಳಿದ್ದಾರೆ.
