ನವದೆಹಲಿ : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.
ಸೌಜನ್ಯ ತಾಯಿ ಕುಸುಮವತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಇಂದು ನಡೆಸಲಾಯಿತು.
ವಿಚಾರಣೆ ವೇಳೆ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್, ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿದೆ. ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮಂದುವರಿಸಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇನ್ನು ಮರು ತನಿಖೆಗೆ ಒಪ್ಪಿಕೊಂಡಿರುವ ಸುಪ್ರೀಂ ಕೋರ್ಟ್, ಯಾವ ರೀತಿಯ ತನಿಖೆ ಎನ್ನುವ ಬಗ್ಗೆ ಆದೇಶ ಕಾಯ್ದಿರಿಸಿದೆ.
ಇದನ್ನೂ ಓದಿ : ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!


















