ಬೆಂಗಳೂರು : ದೇಶದಲ್ಲೇ ಬೃಹತ್ ಬ್ಯಾಂಕ್ ಎನಿಸಿರುವ, ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ (SBI Recruitment 2025) 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 10 ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 28 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು : ಭಾರತೀಯ ಸ್ಟೇಟ್ ಬ್ಯಾಂಕ್ (SBI)
ಒಟ್ಟು ಹುದ್ದೆ : 10
ಹುದ್ದೆಗಳ ಹೆಸರು : ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ : ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 28
ಉದ್ಯೋಗ ಸ್ಥಳ : ಮಹಾರಾಷ್ಟ್ರ ಸೇರಿ ದೇಶದ ಹಲವೆಡೆ
ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಂಬಿಎ, ಪಿಜಿಡಿಎಂ, ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.35 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು sbi.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಒಬಿಸಿ, ಜನರಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ಸೈಟ್ sbi.co.in ಗೆ ಭೇಟಿ ನೀಡಬೇಕು.
- ನಿಮಗೆ ಅನ್ವಯಿಸುವ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
- ಹುದ್ದೆಯ ಅಧಿಸೂಚನೆ ಓದಬೇಕು
- ಆನ್ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
- ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
- ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು