ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎನ್ನುವವರಿಗೆ ಗುಡ್ ನ್ಯೂಸ್ ದೊರೆತಿದೆ. ದೇಶದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿಯೇ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ (SBI Recruitment 2026) ಖಾಲಿ ಇರುವ 1,576 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 1,576 ಜೂನಿಯರ್ ಅಸೋಸಿಯೇಟ್, ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸ್ಟೇಟ್ ಬ್ಯಾಂಕ್
ಒಟ್ಟು ಹುದ್ದೆಗಳು: 1,576
ಹುದ್ದೆಗಳ ಹೆಸರು: ಜೂನಿಯರ್ ಅಸೋಸಿಯೇಟ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 27
ಜೂನಿಯರ್ ಅಸೋಸಿಯೇಟ್, ಡೆಪ್ಯುಟಿ ವೈಸ್ ಪ್ರೆಸಿಡೆಂಟ್, ಡೆಪ್ಯೂಟಿ ಮ್ಯಾನೇಜರ್, ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂಎಸ್ಸಿ, ಎಂಸಿಎ, ಎಂ.ಇ, ಎಂ.ಟೆಕ್, ಎಂಬಿಎ ಕೋರ್ಸ್ ಮುಗಿಸಿರಬೇಕು. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಅವರ ಹುದ್ದೆಗಳ ಆಧಾರದ ಮೇಲೆ ಮಾಸಿಕ 1.05 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸಲು ಬಯಸುವವರು sbi.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಆನ್ ಲೈನ್ ಪೂರ್ವಭಾವಿ ಪರೀಕ್ಷೆ, ಆನ್ ಲೈನ್ ಮುಖ್ಯ ಪರೀಕ್ಷೆ, ಸ್ಥಳೀಯ ಭಾಷಾ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ : ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?


















