ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಿದೆ. ದೇಶದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿಯೇ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ (SBI Recruitment 2026) ಖಾಲಿ ಇರುವ 100 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 100 ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸ್ಟೇಟ್ ಬ್ಯಾಂಕ್
ಒಟ್ಟು ಹುದ್ದೆಗಳು: 100
ಹುದ್ದೆಗಳ ಹೆಸರು: ಟ್ರೇಡ್ ಫೈನಾನ್ಸ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 2
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಕೋರ್ಸ್ ಮುಗಿಸಿರಬೇಕು. ಪಶ್ಚಿಮ ಬಂಗಾಳದ ಕಲ್ಕತ್ತ ಹಾಗೂ ತೆಲಂಗಾಣದ ಹೈದರಾಬಾದ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಅವರ ಕಾರ್ಯಾನುಭವದ ಆಧಾರದ ಮೇಲೆ ಮಾಸಿಕ 93 ಸಾವಿರ ರೂಪಾಯಿವರೆಗೆ ಪ್ಯಾಕೇಜ್ ನೀಡಲಾಗುತ್ತದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸಲು ಬಯಸುವವರು https://sbi.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು.



















