ಬೆಂಗಳೂರು: ಎಸ್ಸಿ, ಎಸ್ಟಿ ಸಚಿವರು, ಶಾಸಕರ ಸಭೆ ಇಂದು ಸಚಿವ ಮಹಾದೇವಪ್ಪ ನಿವಾಸದಲ್ಲಿ ನಡೆಯಿತು.
ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಈ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದರು. ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡುವುದು. ಪರಿಶಿಷ್ಟ ಸಮುದಾಯಗಳ ಬೇಡಿಕೆಗೆ ಅನುಸಾರವಾಗಿ ಸರ್ಕಾರ ಅವರಿಗೆ ಯಾವ ರೀತಿ ನೆರವಾಗಬಹುದು ಎಂಬುವುದರ ಕುರಿತು ಈ ವೇಳೆ ಚರ್ಚೆ ನಡೆಸಲಾಯಿತು.
ಅಲ್ಲದೇ, ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಸಂಘಟನೆ ಮಾಡುವುದರ ಕುರಿತು, ಸಮುದಾಯ ಶಾಸಕರಿಗೆ ಹೆಚ್ಚಿನ ಅನುದಾನ ಸೇರಿದಂತೆ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಅವಕಾಶ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಚಿವರಾದ ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ್, ಶಿವರಾಜ್ ತಂಗಡಗಿ, ಕೆ.ಎನ್. ರಾಜಣ್ಣ, ಅನಿಲ್ ಚಿಕ್ಕಮಾದು, ಅನೇಕಲ್ ಶಿವಣ್ಣ, ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವರು ಇದ್ದರು.