36 ವರ್ಷ ರಾಜಕೀಯ ಅನುಭವದಲ್ಲಿ ಇಂತಹ ಕೆಟ್ಟ ಸರ್ಕಾರ ನಾನು ನೋಡಿಲ್ಲ. ಕಾಂಗ್ರೆಸ್ ಸರ್ಕಾರ ಜನರಿಗೆ ಸುಲಭವಾಗಿ ವಂಚಿಸಿದೆ. ಗ್ಯಾರಂಟಿಯೂ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಉಪಸಭಾಧ್ಯಕ್ಷ ಜೆಕೆ ಕೃಷ್ಣ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿಗಾರರಿಗೆ ಸ್ಪಂದಿಸಿದ ಅವರು, ಜನರಿಗೆ ಮೋಸ ಮಾಡಿ, ಸುಳ್ಳು ಹೇಳಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿಗಳನ್ನು ನಿಭಾಯಿಸಲು ಎಸ್ಸಿ,ಎಸ್ಟಿ ಹಣ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.



















