ಬೆಂಗಳೂರು: ಕೇಂದ್ರ ಸರ್ಕಾರವು ದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಹೌದು, ದೇಶದ ಯಾವುದೇ ಮಾನ್ಯತೆ ಪಡೆದ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸಮುದಾಯದ ವಿದ್ಯಾರ್ಥಿಗಳಿಗೆ 48 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹತೆಗಳು ಏನೇನು?
ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು. ಕಡ್ಡಾಯವಾಗಿ ಎಸ್ಸಿ, ಎಸ್ಟಿ ಅಥವಾ ಒಬಿಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿಯನ್ನು ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
ಅಗತ್ಯ ದಾಖಲೆಗಳು
ಆಸಕ್ತ ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ವಿದ್ಯಾರ್ಥಿವೇತನ ಪೋರ್ಟಲ್ ಆಗಿರುವ scholarships.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯವಾಗಿವೆ.
ಆಧಾರ್ ಕಾರ್ಡ್
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
12ನೇ ತರಗತಿಯ ಅಂಕಪಟ್ಟಿ
ಬ್ಯಾಂಕ್ ಖಾತೆಯ ವಿವರ
ಪಾಸ್ ಪೋರ್ಟ್ ಸೈಜಿನ ಫೋಟೋ
ದೇಶದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರವು ವಿದ್ಯಾರ್ಥಿವೇತನ ನೀಡುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ನಂತರ, ಸಂಬಂಧಿತ ಇಲಾಖೆಯು ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಅರ್ಹ ವಿದ್ಯಾರ್ಥಿಗಳನ್ನು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಇದರ ನಂತರ, ನಿಗದಿತ ಸಮಯದಲ್ಲಿ ವಿದ್ಯಾರ್ಥಿವೇತನದ ಮೊತ್ತವನ್ನು ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.
ಇದನ್ನೂ ಓದಿ : ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲಿ ಮಹಿಳಾ ಸಿಬ್ಬಂದಿಯ ಸರಗಳ್ಳತನ | ಸಿಸಿಟಿವಿಯಲ್ಲಿ ದೃಶ್ಯ ಸೆರೆ



















