ರಾಜ್ಯದಲ್ಲಿ 3-4 ಕಡೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಐಕ್ಯತಾ ಸಮಾವೇಶ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಎಸ್ಸಿ, ಎಸ್ಟಿ ಅಭಿವೃದ್ಧಿ ಪರಿಷತ್ ಸಭೆಯ ಬಳಿಕ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಈ ಸಮುದಾಯಗಳಿಗೆ ನೀಡಿದ ಭರವಸೆಗಳು ಮತ್ತು ಈಡೇರಿಸಿದ ಯೋಜನೆಗಳ ಕುರಿತು ಸಮಾವೇಶದಲ್ಲಿ ತಿಳಿಸಲಾಗುವುದು ಎಂದರು.
ಇದೇ ವೇಳೆ, ಮುಂದಿನ ವರ್ಷದಿಂದ ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳ ಸಮವಸ್ತ್ರಕ್ಕೆ ಹೊಸ ರೂಪ ನೀಡಲು ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಖಾಸಗಿ ಶಾಲೆಗಳ ರೀತಿಯಲ್ಲಿ ಸರ್ಕಾರಿ ಮಕ್ಕಳಿಗೂ ಉತ್ತಮ ಸಮವಸ್ತ್ರ ನೀಡಲಾಗುವುದು ಎಂದ ಅವರು, ಸದ್ಯದಲ್ಲೇ ಅಲ್ಪಸಂಖ್ಯಾತರು, ಒಕ್ಕಲಿಗ, ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರ ಜತೆಗೂ ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.


















