ಬೆಂಗಳೂರು: ಪ್ರಭು ಫ್ಯಾಮಿಲಿ ಚಾರಿಟೆಬಲ್ ಸಂಸ್ಥೆ ವತಿಯಿಂದ 2025-26ನೇ ಸಾಲಿನಲ್ಲಿ ಕಾನೂನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರವಿಂದ ಪ್ರಭು ಲಾ ಸ್ಕಾಲರ್ ಶಿಪ್ (Aravind Prabhu Law Scholarship 2025) ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಕರ್ನಾಟಕದ ಬಡ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ನೀಡುವ ದೃಷ್ಟಿಯಿಂದ ವಿದ್ಯಾರ್ಥಿವೇತನವನ್ನು ಘೋಷಣೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಣಕಾಸು ನೆರವು ಪಡೆಯಬಹುದಾಗಿದೆ.
“ಅರ್ಹತೆಗಳು ಏನೇನು?”
ಅರ್ಜಿ ಸಲ್ಲಿಸುವವರು ಭಾರತೀಯ ನಾಗರಿಕರಾಗಿರಬೇಕು. ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾಲಯ, ಹುಬ್ಬಳ್ಳಿಯ ಜೆಎಸ್ಎಸ್ ಸಕ್ರಿ ಕಾನೂನು ಕಾಲೇಜು ಹಾಗೂ ಮಂಗಳೂರಿನಲ್ಲಿರುವ ಎಸ್‌ಡಿಎಂ ಲಾ ಕಾಲೇಜಿನಲ್ಲಿ ಎಲ್ಎಲ್‌ಬಿ ಅಧ್ಯಯನ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.60ರಷ್ಟು ಅಂಕಗಳನ್ನು ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ತಿಳಿಸಲಾಗಿದೆ.
ಸ್ನಾತಕೋತ್ತರ ಪದವಿ ಓದುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದು. ಅವರು ಪದವಿಯಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು ಎಂದು ಸೂಚಿಸಲಾಗಿದೆ. ಮೆರಿಟ್ ಆಧಾರದ ಮೇಲೆ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಕೋರ್ಸ್ ಮುಗಿಯುವವರೆಗೆ ಪ್ರತಿ ವರ್ಷ ನಿಗದಿತ ಮೊತ್ತವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುತ್ತದೆ.
“ಅರ್ಜಿ ಸಲ್ಲಿಸುವುದು ಹೇಗೆ?”
ಆಸಕ್ತ ಅಭ್ಯರ್ಥಿಗಳು ಮೊದಲಿಗೆ https://www.prabhufamilycharitabletrust.org/blank-3 ವೆಬ್ ಸೈಟ್ ಗೆ ಭೇಟಿ ನೀಡಬೇಕು. ಇಲ್ಲಿ ಸ್ಕಾಲರ್ ಶಿಪ್ ಅರ್ಜಿಯನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್, ಆದಾಯ ಪ್ರಮಾಣಪತ್ರ, ಶೈಕ್ಷಣಿಕ ಪ್ರಮಾಣಪತ್ರಗಳು ಸೇರಿ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅಬ್ ಮಿಟ್ ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ PFCT@prabhullc.net ಮೇಲ್ ಮಾಡಬಹುದು.