ಬೆಳಗಾವಿ: ಶಾಲಾ ಬಸ್ ವೊಂದಕ್ಕೆ ಟಿಪ್ಪರ್ ಡಿಕ್ಕಿಯಾದ(Accident) ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಬೆಳಗಾವಿ (Belagavi) ತಾಲೂಕಿನ ಭೂತರಾಮನಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ ನಲ್ಲಿ ಕೊಲ್ಹಾಪುರದಿಂದ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಬಂದಿದ್ದರು. ಆ ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದರು.
ಬಳಿಕ ಪ್ರಾಣಿ ಸಂಗ್ರಹಾಲಯದಿಂದ ವಾಪಾಸಾಗುವಾಗ ಈ ದುರ್ಘಟನೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
