ಬೆಂಗಳೂರು: ಚಾಲಕನ ಎಡವಟ್ಟಿನಿಂದ ಖಾಸಗಿ ಶಾಲಾ ಬಸ್ಸೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಕೂದಲೆಳೆ ಅಂತದರಲ್ಲಿ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ನಗರದ ಹೆಣ್ಣೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಇಂದು ಬೆಳ್ಳಂಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಈ ಅಪಘಾತದಲ್ಲಿ ಬಸ್, ಬೈಕ್ ಸವಾರನಿಗ ಗುದ್ದಿದ್ದು, ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಆದರೆ ಬಸ್‌ನಲ್ಲಿದ್ದ ಶಾಲಾ ಮಕ್ಕಳು ಅದೃಷ್ಟವಶತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿರುವ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ: ನಾಗರಹೊಳೆ, ಬಂಡೀಪುರ ಸಫಾರಿ ಬಂದ್ | ಹೋಟೆಲ್ ಉದ್ಯಮಕ್ಕೆ ಭಾರೀ ಹಿನ್ನಡೆ



















