ಉಡುಪಿ : ಶಾಲಾ ಬಸ್ಸೊಂದು ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಣಿಪಾಲದ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ಇಂದು ಬೆಳಿಗ್ಗೆ ನಡೆದಿದೆ.
ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೆಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ರಿವರ್ಸ್ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಈ ಬಸ್ಸಿನಲ್ಲಿ ಸುಮಾರು 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಓರ್ವ ಬಾಲಕಿ ತೀವ್ರ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!


















