ಕಾರವಾರ : ಶಾಲಾ ಮಕ್ಕಳನ್ನು ಕರೆದೊಯುತ್ತಿದ್ದ ಓಮಿನಿ ನಿಂತಿದ್ದ ಪಿಕಪ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ಧಾಣದ ಬಳಿ ನಡೆದಿದೆ.
ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮಟಾದ ಡಾ.ಎ.ವಿ.ಬಾಳಿಗಾ ಆಂಗ್ಮ ಮಾಧ್ಯಮ ಶಾಲೆಯ ವಾಹನ ಎಂದು ಹೇಳಲಾಗಿದೆ.
ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕುಮಟಾ ಪೊಲೀಸರಿಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ : ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ವಿರಾಟ್ ಕೊಹ್ಲಿ, ಕುಲದೀಪ್ ಯಾದವ್



















