ನೆಲಮಂಗಲ: ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿರುವ ಘಟನೆಯೊಂದು ನಡೆದಿದೆ.
ಈ ಘಟನೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುವಿನ ಹೊಸ ಕಾಲೋನಿಯಲ್ಲಿ ನಡೆದಿದೆ. ಕಾಲೋನಿಯಲ್ಲಿನ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮೇಲ್ಛಾವಣಿ ಕುಸಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಇದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ದಿಢೀರನೇ ಮೇಲ್ಛಾವಣಿ ಬಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ದೊಡ್ಡ ಅನಾಹುತ ಸಂಭವಿಸಿಲ್ಲ. ಮಧ್ಯಾಹ್ನದ ಬಿಸಿಯೂಟ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಶಾಲೆಯಲ್ಲಿ ಒಟ್ಟು 24 ಜನ ಮಕ್ಕಳು ಇದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಹಾಗೂ ಓರ್ವ ಅಡುಗೆ ಸಹಾಯಕಿಗೆ ಗಾಯಗಳಾಗಿವೆ. ಕಳಪೆ ಕಾಮಗಾರಿಯಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಳೆದ ಒಂದು ವರ್ಷದ ಹಿಂದೆ ಮಾಡಿದ್ದ ಕಾಮಗಾರಿ