ಬೆಂಗಳೂರು: ಕೊರೊನಾ ಆತಂಕ ಮತ್ತೆ ರಾಜ್ಯಕ್ಕೆ ಶುರುವಾಗಿದ್ದು, ಇದರ ಮಧ್ಯೆಯೇ ಶಾಲಾ-ಕಾಲೇಜುಗಳು ಆರಂಭವಾಗುತ್ತಿವೆ. ಹೀಗಾಗಿ ಪಾಲಕರು ಆತಂಕ ಪಡುವಂತಾಗಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನು ಸೂಚಿಸಿದೆ. ಶಾಲಾ-ಕಾಲೇಜುಗಳಲ್ಲಿ ಮುಂಜಾಗ್ರತಾ ಕ್ರಮ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ (Health Department) ಮುಂದಾಗಿವೆ.
ಮಾರ್ಗಸೂಚಿಯಲ್ಲಿ ಏನೇನಿರಬಹುದು?
- ಶಿಕ್ಷಕರು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.
- ಪ್ರಾರ್ಥನೆ, ಊಟದ ಸಮಯದಲ್ಲಿ ಸಾಮಾಜಿಕ ಅಂತರ
- ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ರಜೆ ನೀಡುವುದು
- ಆರೋಗ್ಯ ತೊಂದರೆಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ
- ಶಾಲಾ-ಕಾಲೇಜುಗಳಲ್ಲಿ ಸ್ಯಾನಿಟೈಸರ್ ಬಳಕೆ ಮಾಡುವುದು.
- ಶೌಚಾಲಯ, ಕುಡಿಯುವ ನೀರಿನಲ್ಲಿ ಶುಚಿತ್ವ ಕಾಪಾಡಲು ಆದ್ಯತೆ ಕೊಡುವುದು