ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಹಿಡಿಯಬೇಕು, ಸರ್ಕಾರಿ ಹುದ್ದೆ ಪಡೆದು ಜೀವನದಲ್ಲಿ ಸೆಟಲ್ ಆಗಬೇಕು ಎನ್ನುವವರಿಗೆ ಶುಭ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ (SCI Assistant Recruitment 2025) ಖಾಲಿ ಇರುವ 75 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 75
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 27
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅಸಿಸ್ಟಂಟ್ ಮ್ಯಾನೇಜರ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಂಬಿಎ, ಸಿಎ, ಪದವಿ, ಎಂಜಿನಿಯರಿಂಗ್, ಬಿಬಿಎ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 27 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 30 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಮೂಹ ಚರ್ಚೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://onlineapply.net.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.