ಹಾವೇರಿ: ಮನೆ ಮುಂದೆ ನಿಲ್ಲಿಸಿದ್ದ 14 ಲಕ್ಷ ರೂ. ಮೌಲ್ಯದ ಸ್ಕಾರ್ಪಿಯೋ ಕಾರು (Scorpio Car) ಕಳ್ಳತನವಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ನಗರದ(Haveri) ಸಿದ್ದಾರೋಢ ಕಾಲೋನಿಯಲ್ಲಿ ನಡೆದಿದೆ. ಹಾಸನ ಮೂಲದ ಪ್ರಜ್ವಲ್ ಆರ್. ಎಂಬುವರಿಗೆ ಸೇರಿದ ಕಾರು ಎಂದು ಗುರುತಿಸಲಾಗಿದೆ. KA-04 NB-0449 ಸಂಖ್ಯೆಯ ಕಾರು ಕಳ್ಳತನವಾಗಿದೆ.
ಪ್ರಜ್ವಲ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು. ಮನೆ ಮುಂದೆ ನಿಲ್ಲಿಸಿದ್ದ ವೇಳೆ ಖದೀಮರು ಕಳ್ಳತನ ಮಾಡಿದ್ದಾರೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ (Haveri Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.