ಬೆಂಗಳೂರು: ದೇಶದ ಷೇರುಪೇಟೆ ನಿಯಂತ್ರಣ ಸಂಸ್ಥೆಯಾಗಿರುವ ಸೆಬಿಯಲ್ಲಿ (SEBI Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಪಾರ್ಟ್ ಟೈಮ್ ಕೌನ್ಸಿಲರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)
ಒಟ್ಟು ಹುದ್ದೆ: ವಿವಿಧ
ಹುದ್ದೆಗಳ ಹೆಸರು: ಪಾರ್ಟ್ ಟೈಮ್ ಕೌನ್ಸಿಲರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 11
ಮುಂಬಯಿಯಲ್ಲಿರುವ ಸೆಬಿ ಕಚೇರಿಯಲ್ಲಿ ಅರೆಕಾಲಿಕ ಸಮಾಲೋಚಕರಾಗಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 75 ಸಾವಿರ ರೂಪಾಯಿ ಸಂಭಾವನೆ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ sebi.gov.in ಗೆ ಭೇಟಿ ನೀಡಬೇಕು.
ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆ ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
SEBI Bhavan Human Resources Department Plot No. C4-A, “G” Block Bandra-Kurla Complex Bandra (E), Mumabi – 400051. ಹಾಗೆಯೇ, ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು hrd@sebi.gov.in ಗೆ ಮೇಲ್ ಮಾಡಬಹುದು.
ಇದನ್ನೂ ಓದಿ: ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!



















