ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೆಪ್ಟೆಂಬರ್ 21 ರಿಂದ 23 ರ ವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.
ಆದರೆ, ಪ್ರಧಾನಿ ಮೋದಿ ಅವರು ಅಮೆರಿಕದಲ್ಲಿ ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂಬುವುದನ್ನು ಮಾತ್ರ ವಿದೇಶಾಂಗ ಸಚಿವಾಲಯ ಬಹಿರಂಗಪಡಿಸಿಲ್ಲ.
ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಸೆ. 21ರಂದು ನಡೆಯಲಿರುವ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಸ್ವಗ್ರಾಮದಲ್ಲಿ ಸಭೆಯನ್ನು ಆಯೋಜಿಸಿದ್ದು, ಅವರು ಎರಡನೇ ಅವಧಿಗೆ ಸ್ಪರ್ಧಿಸುತ್ತಿಲ್ಲವಾದುದರಿಂದ ಶೃಂಗಸಭೆಯು ಮಹತ್ವದ್ದಾಗಿದೆ. ಮುಂದಿನ ವರ್ಷ ಭಾರತವು ಮುಂದಿನ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಿದಾಗ, ಯುಎಸ್ ಹೊಸ ಅಧ್ಯಕ್ಷರನ್ನು ಹೊಂದಿರಲಿದೆ.
ಕ್ವಾಡ್ ಶೃಂಗಸಭೆಯಲ್ಲಿ ಜಪಾನ್‌ನ ಫ್ಯೂಮಿಯೊ ಕಿಶಿಡಾ ಮತ್ತು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಕೂಡ ಭಾಗವಹಿಸಲಿದ್ದಾರೆ. ನ್ಯೂಯಾರ್ಕ್ ನಲ್ಲಿ, ಪ್ರಧಾನಿ ಮೋದಿ ಭಾನುವಾರ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅಮೆರಿಕದಲ್ಲಿ 24 ಸಾವಿರಕ್ಕೂ ಅಧಿಕ ಅನಿವಾಸಿ ಭಾರತೀಯರುಸ್ಯರು ‘ಮೋದಿ ಮತ್ತು ಯುಎಸ್’ ಪ್ರೋಗ್ರೆಸ್ ಟುಗೆದರ್’ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮಾತನಾಡಲಿದ್ದಾರೆ.