ಬೆಂಗಳೂರು: ಅಪಹರಣಕ್ಕೆ ಒಳಗಾಗಿದ್ದ ಸಂತ್ರಸ್ತೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ ಐಟಿ ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
113 ಸಾಕ್ಷಿಗಳನ್ನು ಒಳಗೊಂಡ 1,632 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಲಾಗಿದೆ. ಇತ್ತೀಚೆಗಷ್ಟೇ ಸುಮಾರು 2 ಸಾವಿರ ಪುಟಗಳ ಚಾರ್ಜ್ ಶೀಟ್ ನ್ನು ಈಗಾಗಲೇ ಸಲ್ಲಿಸಲಾಗಿತ್ತು. ಇದೀಗ ಸೋಮವಾರ ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ. 30ರಂದು ಪ್ರಜ್ವಲ್ ಅರೆಸ್ಟ್ ಆಗಿದ್ದಾರೆ. ತೋಟದ ಮನೆಯಲ್ಲಿ ಅತ್ಯಾಚಾರ ನಡೆಸಿದ್ದ ಆರೋಪಿ, ಬಸವನಗುಡಿ ಮನೆಯಲ್ಲಿ ಕೂಡ ಅತ್ಯಾಚಾರ ಎಸಗಿದ್ದ. ಮನೆ ಕ್ಲೀನ್ ಮಾಡಲು ಬಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ರೇಪ್ ಬಳಿಕ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಪ್ರಜ್ವಲ್ ಗೆ ಸಂಕಷ್ಟ ಶುರುವಾಗಿದೆ.