ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಫಲಿತಾಂಶದಲ್ಲಿ ದ್ವಿತೀಯ ಸ್ಥಾನದಲ್ಲಿದೆ.
ಬೆಂಗಳೂರು ದಕ್ಷಿಣ ಮೂರನೇ ಸ್ಥಾನ ಅಲಂಕರಿಸಿದೆ. ಉಳಿದಂತೆ ಯಾದಗಿರಿ ಕಡೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಈ ಬಾರಿ ಶೇ. 82.54 ಪ್ರತಿ ಶತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶ್ರೇಯಾ ಎಸ್ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಉಳಿದಂತೆ ಕಲಾ ವಿಭಾಗದಲ್ಲಿ ಕೊಟ್ಟೂರಿನ ಇಂದು ಕಾಲೇಜಿನ ಸಂಜನಾ ಬಾಯಿ ಫಸ್ಟ್ ರ್ಯಾಂಕ್ ಗಿಟ್ಟಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನರಾ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಫಸ್ಟ್ ರ್ಯಾಂಕ್ ಪಡೆದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.


















