ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬೀಳುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾತುರದಿಂದ ಕಾಯುತ್ತಿದ್ದಾರೆ.
ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ-1 ಪರೀಕ್ಷೆ ಫಲಿತಾಂಶ (2nd PUC Exam Result) ಏ. 8ರಂದು ಪ್ರಕಟವಾಗುತ್ತಿದೆ. ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ದ್ವಿತೀಯ ಪಿಯುಸಿ ಮೊದಲ ಪರೀಕ್ಷೆ ನಡೆದಿತ್ತು. ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ನಾಳೆ ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಇಲಾಖೆ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಫಲಿತಾಂಶವನ್ನು https://kerresults.nic.in ಗೆ ಹೋಗಿ ವಿದ್ಯಾರ್ಥಿಗಳು ನೋಡಬಹುದು.