ಪುತ್ತೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ.
ಜೆರಾಕ್ಸ್ ಮಾಡಿ ಬರುವುದಾಗಿ ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದೆ ಎನ್ನಲಾಗಿದೆ. ವಿದ್ಯಾರ್ಥಿನಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರಿನ ಪಡ್ನೂರು ನಿವಾಸಿಯಾಗಿರುವ ಯುವತಿ ನಾಪತ್ತೆಯಾಗಿದ್ದಾರೆ. ಗಿರಿಜಾ ದೇವೆ, ಮಂಟು ಪಾಸ್ವಾನ್ ದಂಪತಿಗಳ ಪುತ್ರಿ ರೂಪ (19) ನಾಪತ್ತೆಯಾಗಿರುವ ಯುವತಿ. ನಾಪತ್ತೆಯಾದ ನಂತರ ವಿದ್ಯಾರ್ಥಿನಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ. ಸದ್ಯ ಯುವತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.



















