ಬೆಂಗಳೂರು: ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ನೇಮಕವಾಗಿದ್ದಾರೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
1996 ಬ್ಯಾಚ್ ನ ಸೀಮಂತ್ ಕುಮಾರ್ ಸಿಂಗ್ ಅವರು ಬಿಹಾರ ಮೂಲದವರು. ಬೆಂಗಳೂರು ಅಡಿಷನಲ್ ಕಮಿಷನರ್, ಸೆಂಟ್ರಲ್ ರೇಂಜ್ ಐಜಿಯಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ. ಬೆಂಗಳೂರು ಪೂರ್ವ ವಿಭಾಗದ ಐಜಿಯಾಗಿ ಕೆಲಸ ನಿರ್ವಹಿಸಿದ್ದರು. ಎಸಿಬಿ ಮುಖ್ಯಸ್ಥರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಈಗ 39 ನೇ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ ಉಂಟಾಗಿ 11 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಈಗ ಕಮಿಷನರ್ ಬಿ.ದಯಾನಂದ್ ಅವರನ್ನು ಕೂಡ ಅಮಾನತು ಮಾಡಲಾಗಿದೆ. ಖಾಲಿ ಇರುವ ಸ್ಥಾನಕ್ಕೆ ಸೀಮಂತ್ ಕುಮಾರ್ ಸಿಂಗ್ ರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.