ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆಯಾಗಿದೆ.
ನೂತನ ಅಧ್ಯಕ್ಷರಾಗಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದ ಸಂದರ್ಭದಲ್ಲಿ ನರೇಂದ್ರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ಈಗ ಅವರನ್ನು ಪಿಸಿಬಿ ಅಧ್ಯಕ್ಷರನ್ನಾಗಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.