ಬೆಂಗಳೂರು: ಗ್ಯಾರಂಟಿ ಯೋಜನೆ (Guarantee Schemes) ಗಳನ್ನು ಘೋಷಿಸಿದ್ದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅವುಗಳನ್ನು ಘೋಷಣೆ ಮಾಡಿತು. ಹಲವರು ಇದನ್ನು ವಿರೋಧಿಸುತ್ತಲೇ ಬರುತ್ತಿದ್ದಾರೆ. ಸ್ವತಃ ಪಕ್ಷದ ಹಿರಿಯ ನಾಯಕ ಆರ್.ವಿ. ದೇಶಪಾಂಡೆ(RV Deshpande) ಈಗ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ (Dandeli) ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೆರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಪುರುಷರೂ ಬೇಡಿಕೆ ಇಟ್ಟಿದ್ದರು. ಎಲ್ಲರಿಗೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆ ನಡೆಸುವುದು ಹೇಗೆ ಎಂದು ಪ್ರಸ್ನಿಸಿದ್ದಾರೆ.